Wednesday, 21 October 2026

Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • ಶಿವಣ್ಣನ ಜೊತೆಗೆ ವಶಿಷ್ಠ ಸಿಂಹ
- ಸಿನಿಮಾ

ಶಿವಣ್ಣನ ಜೊತೆಗೆ ವಶಿಷ್ಠ ಸಿಂಹ

“ಆರ್ ಚಂದ್ರು ನಿರ್ದೇಶಿಸುತ್ತಿರುವ, ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್”(OM) ಚಿತ್ರದಲ್ಲಿ ವಸಿಷ್ಠ ಸಿಂಹ . ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ವಸಿಷ್ಠ ಸಿಂಹ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಆರ್ ಸಿ ಸ್ಟುಡಿಯೋಸ್ . ಸದಭಿರುಚಿಯ ಚಿತ್ರಗಳ ನಿರ್ದೇಶಕ ಆರ್ ಚಂದ್ರು, “ಕಬ್ಜ” ಚಿತ್ರದ ನಂತರ “ಒರಿಜಿನಲ್ ಮಾನ್ ಸ್ಟರ್”(OM) ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ […]

“ಆರ್ ಚಂದ್ರು ನಿರ್ದೇಶಿಸುತ್ತಿರುವ, ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್”(OM) ಚಿತ್ರದಲ್ಲಿ ವಸಿಷ್ಠ ಸಿಂಹ .

ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ವಸಿಷ್ಠ ಸಿಂಹ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಆರ್ ಸಿ ಸ್ಟುಡಿಯೋಸ್ .

ಸದಭಿರುಚಿಯ ಚಿತ್ರಗಳ ನಿರ್ದೇಶಕ ಆರ್ ಚಂದ್ರು, “ಕಬ್ಜ” ಚಿತ್ರದ ನಂತರ “ಒರಿಜಿನಲ್ ಮಾನ್ ಸ್ಟರ್”(OM) ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನ ಚಂದ್ರು ಅವರು ನಿರ್ಮಿಸುತ್ತಿರುವ ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದಿಂದ ಜನಪ್ರಿಯರಾಗಿರುವ ಹೆಸರಾಂತ ನಟ ವಸಿಷ್ಠ ಸಿಂಹ ಅಭಿನಯಿಸುತ್ತಿದ್ದಾರೆ. ವಸಿಷ್ಠ ಸಿಂಹ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ವಿಷಯವನ್ನು ತಿಳಿಸಿರುವ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ವಿಶೇಷ ಪೋಸ್ಟರ್ ಬಿಡಿಗಡೆ ಮಾಡಿ ವಸಿಷ್ಠ ಸಿಂಹ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಬಹು ನಿರೀಕ್ಷಿತ ಈ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದ್ದು, ಇದೇ ತಿಂಗಳ 25 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ತೆಲುಗು ನಟ ಸುನೀಲ್ ಹಾಗೂ ವಸಿಷ್ಠ ಸಿಂಹ ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಶಿವಣ್ಣ ಹಾಗೂ ವಸಿಷ್ಠ ಸಿಂಹ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ಮಫ್ತಿ”, “ಟಗರು” ಹಾಗೂ “ಕವಚ” ಚಿತ್ರಗಳು ಎಲ್ಲರ ಮನ ಗೆದ್ದಿದ್ದು, ಈಗ “OM” ಚಿತ್ರದಲ್ಲಿ ಶಿವರಾಜಕುಮಾರ್ ಅವರ ಜೊತೆಗೆ ವಸಿಷ್ಠ ಸಿಂಹ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಶಿವರಾಜಕುಮಾರ್, ವಸಿಷ್ಠ ಸಿಂಹ ಹಾಗೂ ಆರ್ ಚಂದ್ರು ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಹಲವು ವಿಶೇಷಗಳಿಗೆ ಸಾಕ್ಷಿಯಾಗಿರುವ ಹಾಗೂ “ಒರಿಜಿನಲ್ ಮಾನ್ ಸ್ಟರ್(OM) ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಈ ಚಿತ್ರ ಚಿತ್ರೀಕರಣ ಸಮಯದಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ.

ಆರ್ ಚಂದ್ರು ಅವರ ನಿರ್ದೇಶನದಲ್ಲಿ ಅಭಿನಯಿಸಬೇಕೆಂದು ಬಹಳ ದಿನಗಳಿಂದ ಕಾಯುತ್ತಿದ್ದೆ. ಈಗ ಅವಕಾಶ ಸಿಕ್ಕಿದೆ. ಆರ್ ಚಂದ್ರು ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ಶಿವಣ್ಣ ಅವರ ಜೊತೆಗೆ ನಟಿಸುತ್ತಿರುವುದು ಬಹಳ ಖುಷಿಯಾಗಿದೆ ಎಂದು ವಸಿಷ್ಠ ಸಿಂಹ ತಿಳಿಸಿದ್ದಾರೆ.
‌ ‌ ‌‌ ‌ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ಎ ಜೆ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ತೆಲುಗು ನಟ ಸುನೀಲ್ ಹಾಗೂ ವಸಿಷ್ಠ ಸಿಂಹ ಅವರು ಅಭಿನಯಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಎಲ್ಲಾ ಭಾಷೆಗಳ ಜನಪ್ರಿಯ ಕಲಾವಿದರು “OM” ಚಿತ್ರದಲ್ಲಿ ಅಭಿನಯಿಸಿಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕ ಆರ್ ಚಂದ್ರು ತಿಳಿಸಿದ್ದಾರೆ.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.