Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • “ಐ ಲವ್” ಯು “ಪರಿಮಳೆ”
- ಸಿನಿಮಾ

“ಐ ಲವ್” ಯು “ಪರಿಮಳೆ”

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್: ನವೆಂಬರ್ 27ಕ್ಕೆ ಸಿನಿಮಾ ತೆರೆಗೆ ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದೆ. ಪ್ರೇಕ್ಷಕರನ್ನು ಸೆಳೆಯುವ ಕ್ಯಾಚಿ ಟ್ಯೂನ್ ಹಾಗೂ ಸಾಹಿತ್ಯದಿಂದ ಕೂಡಿರುವ ಈ ಹಾಡಿಗೆ ಖ್ಯಾತ ಗಾಯಕ ನವೀನ್ ಸಜ್ಜು ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ […]

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್: ನವೆಂಬರ್ 27ಕ್ಕೆ ಸಿನಿಮಾ ತೆರೆಗೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಲಕ್ಷ್ಮಿಪುತ್ರ’ ಚಿತ್ರದ “ಐ ಲವ್ ಯೂ ಪರಿಮಳ” ಎಂಬ ಲಿರಿಕಲ್ ವಿಡಿಯೋ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದೆ. ಪ್ರೇಕ್ಷಕರನ್ನು ಸೆಳೆಯುವ ಕ್ಯಾಚಿ ಟ್ಯೂನ್ ಹಾಗೂ ಸಾಹಿತ್ಯದಿಂದ ಕೂಡಿರುವ ಈ ಹಾಡಿಗೆ ಖ್ಯಾತ ಗಾಯಕ ನವೀನ್ ಸಜ್ಜು ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

ಖ್ಯಾತ ನಿರ್ದೇಶಕ ಎ.ಪಿ. ಅರ್ಜುನ್ ಅವರ ‘ಎಪಿ ಅರ್ಜುನ್ ಫಿಲ್ಮ್ಸ್’ ಬ್ಯಾನರ್‌ನಡಿಯಲ್ಲಿ ಅನ್ನಪೂರ್ಣ ಎ.ಪಿ. ಅರ್ಜುನ್ ಈ ಚಿತ್ರವನ್ನು ನಿರ್ಮಿಸಿದ್ದು, ರವಿಕಿರಣ್ ಎಂ. ಗೌಡ ಸಹ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ಚಿತ್ರಕ್ಕೆ ವಿಜಯ್ ಎಸ್. ಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದು, ನಿರ್ದೇಶಕರ ಜೊತೆಗೂಡಿ ಸ್ವತಃ ಎ.ಪಿ. ಅರ್ಜುನ್ ಅವರೇ ಕಥೆ, ಚಿತ್ರಕಥೆ, ಸಾಹಿತ್ಯ ಮತ್ತು ಸಂಭಾಷಣೆ ರಚನೆಯ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇವರಿಗೆ ಸಂಭಾಷಣೆಯಲ್ಲಿ ಪ್ರಶಾಂತ್ ರಾಜಪ್ಪ ಹಾಗೂ ವಿಜಯ್‌ ಈಶ್ವರ್ ಕೈಜೋಡಿಸಿದ್ದಾರೆ.

ಚಿತ್ರದಲ್ಲಿ ಚಿಕ್ಕಣ್ಣ ಹಾಗೂ ವಂದಿತಾ ಗೌಡ ಜೋಡಿಯಾಗಿ ಕಾಣಿಸಿಕೊಂಡಿದ್ದು, ಹಿರಿಯ ನಟಿ ತಾರಾ ಅನುರಾಧ, ಹಾಸ್ಯ ನಟರಾದ ಕುರಿ ಪ್ರತಾಪ್, ಧರ್ಮಣ್ಣ ಕಡೂರು, ಮಿತ್ರ ಹಾಗೂ ಮನು ಮುಂತಾದ ಪ್ರತಿಭಾವಂತ ಕಲಾವಿದರ ತಾರಾಗಣವಿದೆ. ಗಿರೀಶ್ ಆರ್. ಗೌಡ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಅವರ ಸಂಕಲನ, ಭೂಷಣ್ ಅವರ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಭರಪೂರ ಮನರಂಜನೆ ಹೊತ್ತು ತರುತ್ತಿರುವ ‘ಲಕ್ಷ್ಮಿಪುತ್ರ’ ಚಿತ್ರವು ಇದೇ ನವೆಂಬರ್ 27ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.