Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • “ಬಿಂಗೊ” ಬ್ಯಾಂಗ್ “ಬ್ಯಾಂಗ್”
- ಸಿನಿಮಾ

“ಬಿಂಗೊ” ಬ್ಯಾಂಗ್ “ಬ್ಯಾಂಗ್”

25ನೇ ದಿನದ ಸಂಭ್ರಮದಲ್ಲಿ ಆರ್ ಕೆ ಚಂದನ್ ಮತ್ತು ರಾಗಿಣಿ ದ್ವಿವೇದಿ ಅಭಿನಯದ ಬಿಂಗೊ………………. “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಬಿಂಗೊ” ಚಿತ್ರ 25 ದಿನಗಳ ಪ್ರದರ್ಶನ ಕಂಡಿದೆ. ಈಗಾಗಲೇ ಧಾರಾವಾಹಿಗಳ ಮೂಲಕ ಜನಪ್ರಿಯರಾಗಿದ್ದ ನಾಯಕ ಆರ್ ಕೆ ಚಂದನ್ ಅವರ ಅಭಿನಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ರಾಗಿಣಿ ದ್ವಿವೇದಿ ಅವರ ಅಭಿನಯಕ್ಕೂ ಅಭಿಮಾನಿಗಳು ಫಿದಾ ಆಗಿದ್ದಾರೆ. ಶಂಕರ್ […]

25ನೇ ದಿನದ ಸಂಭ್ರಮದಲ್ಲಿ ಆರ್ ಕೆ ಚಂದನ್ ಮತ್ತು ರಾಗಿಣಿ ದ್ವಿವೇದಿ ಅಭಿನಯದ ಬಿಂಗೊ……………….

“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಬಿಂಗೊ” ಚಿತ್ರ 25 ದಿನಗಳ ಪ್ರದರ್ಶನ ಕಂಡಿದೆ. ಈಗಾಗಲೇ ಧಾರಾವಾಹಿಗಳ ಮೂಲಕ ಜನಪ್ರಿಯರಾಗಿದ್ದ ನಾಯಕ ಆರ್ ಕೆ ಚಂದನ್ ಅವರ ಅಭಿನಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ರಾಗಿಣಿ ದ್ವಿವೇದಿ ಅವರ ಅಭಿನಯಕ್ಕೂ ಅಭಿಮಾನಿಗಳು ಫಿದಾ ಆಗಿದ್ದಾರೆ. ಶಂಕರ್ ಕೋನಮಾನಹಳ್ಳಿ ನಿರ್ದೇಶನಕ್ಕೆ ಹಾಗೂ ಚಿತ್ರದ ಕಥೆಗೆ ಜನರು ಮನ ಸೋತಿದ್ದಾರೆ.

“ಪ್ರೇಮದ ಊರಲಿ” ಚಿತ್ರ ರಾಜ್ಯಾದ್ಯಂತ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. ಇದೇ ಸಂದರ್ಭದಲ್ಲಿ “ಬಿಂಗೊ” ಚಿತ್ರ ಕೂಡ 25 ದಿನಗಳನ್ನು ಪೂರೈಸಿದೆ. ಕಂಟೆಂಟ್ ಚೆನ್ನಾಗಿರುವ ಚಿತ್ರಗಳನ್ನು ಕನ್ನಡಿಗರು ಕೈ ಬಿಡುವಿದಿಲ್ಲ ಎಂಬ ಮಾತು ಸಾಬೀತಾಗಿದೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ತಿಳಿಸಿದ್ದಾರೆ.

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಆರ್ ಕೆ ಚಂದನ್ ಅವರಿಗೆ ನಾಯಕಿಯಾಗಿ ರಕ್ಷಾ ನಟಿಸಿದ್ದಾರೆ. ವಿಭಿನ್ನಪಾತ್ರದಲ್ಲಿ ರಾಗಿಣಿ ದ್ವಿವೇದಿ ಅಭಿನಯಿಸಿದ್ದಾರೆ. ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಟರಾಜ್ ಮುದ್ದಾಲ್ ಹಾಗೂ ಹಿತನ್ ಹಾಸನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.