Hello world!

Contact Info

  • ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

  • Phone: +91 99801 79473 |

    +91 98455 00728

  • Email Us: editor@masternews365.com | advertise@masternews365.com

  • Home  
  • ಕಮಲ್ ಹಾಸನ್ – ಸಂಡಿಯಾರ್
- ಸಿನಿಮಾ

ಕಮಲ್ ಹಾಸನ್ – ಸಂಡಿಯಾರ್

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್; ‘ಸಂಡಿಯಾರ್’ ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್ ಅನಾವರಣ .. ಬಹುಭಾಷಾ ನಟ ಕಮಲ್ ಹಾಸನ್ ತಮ್ಮ 73ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ವಿಶೇಷ ಸಂದರ್ಭದಲ್ಲಿ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಅವರ ಬಹುನಿರೀಕ್ಷಿತ ಮುಂದಿನ ಚಿತ್ರಕ್ಕೆ ‘ಸಂಡಿಯಾರ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಆಕರ್ಷಕ ಫಸ್ಟ್ ಲುಕ್ ಪೋಸ್ಟರ್ ಅನ್ನು ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಕಮಲ್ ಹಾಸನ್ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ ‘ರಾಜ್ ಕಮಲ್ ಫಿಲ್ಮ್ಸ್ […]

ಕಮಲ್ ಹಾಸನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್; ‘ಸಂಡಿಯಾರ್’ ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್ ಅನಾವರಣ ..

ಬಹುಭಾಷಾ ನಟ ಕಮಲ್ ಹಾಸನ್ ತಮ್ಮ 73ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ವಿಶೇಷ ಸಂದರ್ಭದಲ್ಲಿ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಅವರ ಬಹುನಿರೀಕ್ಷಿತ ಮುಂದಿನ ಚಿತ್ರಕ್ಕೆ ‘ಸಂಡಿಯಾರ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಆಕರ್ಷಕ ಫಸ್ಟ್ ಲುಕ್ ಪೋಸ್ಟರ್ ಅನ್ನು ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಕಮಲ್ ಹಾಸನ್ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್’ ಈ ಶೀರ್ಷಿಕೆಯನ್ನು ಅನಾವರಣಗೊಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆ ಎಬ್ಬಿಸಿದೆ.

ಚಿತ್ರತಂಡ ಹಂಚಿಕೊಂಡಿರುವ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಕಮಲ್ ಹಾಸನ್ ಅತ್ಯಂತ ರಗಡ್ ಹಾಗೂ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ವಾಹನವೊಂದರ ಪಕ್ಕದಲ್ಲಿ ನಿಂತು, ಅದರ ಕಿಟಕಿಯ ಮೂಲಕ ಒರಗಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದಿರುವ ಅವರ ಖಡಕ್ ಶೈಲಿ ಪ್ರೇಕ್ಷಕರ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಈ ಚಿತ್ರವನ್ನು ‘ಚಿತ್ತಾ’ ಮತ್ತು ‘ಸೇತುಪತಿ’ಯಂತಹ ಯಶಸ್ವಿ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಿರ್ದೇಶಕ ಎಸ್‌ ಯು ಅರುಣ್ ಕುಮಾರ್ ನಿರ್ದೇಶಿಸುತ್ತಿದ್ದು, ಈ ಪ್ರತಿಭಾವಂತ ನಿರ್ದೇಶಕ ಹಾಗೂ ಕಮಲ್ ಹಾಸನ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಮೊದಲ ಪ್ರಾಜೆಕ್ಟ್ ಇದಾಗಿದೆ.

ಚಿತ್ರಕ್ಕೆ ಬಲಿಷ್ಠ ತಾಂತ್ರಿಕ ಬಳಗದ ಬೆಂಬಲವಿದ್ದು, ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ಹೆಸರಾಂತ ಸಾಹಸ ನಿರ್ದೇಶಕ ಜೋಡಿ ಅನ್ಬರಿವ್ ಆ್ಯಕ್ಷನ್ ದೃಶ್ಯಗಳನ್ನು ವಿನ್ಯಾಸಗೊಳಿಸಲಿದೆ. ಛಾಯಾಗ್ರಾಹಕರಾಗಿ ಸುನಿಲ್ ಕೆ.ಎಸ್, ಪ್ರೊಡಕ್ಷನ್ ಡಿಸೈನರ್ ಆಗಿ ಸಿ.ಎಸ್. ಬಾಲಚಂದರ್ ಮತ್ತು ವಸ್ತ್ರವಿನ್ಯಾಸಕಿಯಾಗಿ ಅಮೃತಾ ರಾಮ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಮಲ್ ಹಾಸನ್ ಹಾಗೂ ಆರ್. ಮಹೇಂದ್ರನ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಬಹುನಿರೀಕ್ಷಿತ ಚಿತ್ರವನ್ನು ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ಹಾಗೂ ಟರ್ಮರಿಕ್ ಮೀಡಿಯಾ ಸಂಸ್ಥೆಗಳು ಪ್ರಸ್ತುತಪಡಿಸುತ್ತಿವೆ.

Leave a comment

Your email address will not be published. Required fields are marked *

ನಮ್ಮ ಬಗ್ಗೆ

ಮಾಸ್ಟರ್‌ನ್ಯೂಸ್ 365 ಸಿನಿಮಾ, ರಾಜಕೀಯ, ಕ್ರೀಡೆ, ಆಧ್ಯಾತ್ಮ, ಮನೋರಂಜನೆ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ನಿಖರ, ತಾಜಾ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮತ್ತು ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ.

Contact Us

Phone: +91 99801 79473 |

+91 98455 00728

ವಿಳಾಸ: #31 Ground Floor, 2nd Main, 3rd Cross, Near Guddanna School, Ranganathpura, Bangalore – 560079

Email Us: editor@masternews365.com | advertise@masternews365.com

Website: www.masternews365.com

ಮಾಸ್ಟರ್‌ನ್ಯೂಸ್ 365  @ 2026. All Rights Reserved.